ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ ಎರಡನೇ ದಿನವಾದ ಇಂದು ನಾಯಕ ವಿರಾಟ್ ಕೊಹ್ಲಿ ಸೆಂಚುರಿ ಬಾರಿಸಿದ್ದಾರೆ. ಈ ಮೂಲಕ ಟೆಸ್ಟ್ ಪಂದ್ಯದಲ್ಲಿ ಒಟ್ಟು 24ನೇ ಶತಕ ಸಿಡಿಸಿದ್ದಾರೆ.
ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ನಡೆಯುತ್ತಿರುವ ವೆಸ್ಟ್ ವಿಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮಗದೊಂದು ಮೈಲಿಗಲ್ಲು ತಲುಪಿದರು. ಈ ಮೂಲಕ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ 3,000 ರನ್ ಗಳನ್ನು ಪೂರೈಸಿದ್ದಾರೆ. ಇನ್ನು ಟೆಸ್ಟ್ ಕ್ರಿಕೆಟ್ ನಲ್ಲಿ ವೇಗವಾಗಿ 24 ಶತಕ ಸಿಡಿಸಿದ 2ನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾದ ಡಾನ್ ಬ್ರಾಡ್ಮನ್ ಅವರು 66 ಇನ್ನಿಂಗ್ಸ್ ನಲ್ಲಿ 24 ಶತಕ ಸಿಡಿಸಿದ್ದರು.
ಕೊಹ್ಲಿ 123 ಇನ್ನಿಂಗ್ಸ್ ನಲ್ಲಿ ಈ ಗುರಿ ತಲುಪಿದ್ದರೆ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು 125 ಇನ್ನಿಂಗ್ನ್ ನ್ಲಲಿ 24 ಶತಕ ಸಿಡಿಸಿದ್ದಾರೆ. ಅಲ್ಲದೆ ಕ್ಯಾಪ್ಟನ್ ವಿರಾಟ್ ಕೊಹ್ಲಿ ನಾಯಕತ್ವ ವಹಿಸಿದ ಮೇಲೆ 17ನೇ ಶತಕದ ಸಾಧನೆ ಮಾಡಿದ್ದಾರೆ.
Source: ವಿಶ್ವವಾಣಿ
No comments:
Post a Comment