ಜೂನ್ ನಲ್ಲಿ ನಡೆದ ಕೆ.ಎ.ಎಸ್. ಪರೀಕ್ಷೆಯ ಎರಡು ಪ್ರಶ್ನೆಪತ್ರಿಕೆಗಳಿಗೆ ಮಾತ್ರ ಉತ್ತರಗಳನ್ನ ನೀಡಲಾಗಿದ್ದು, ಇನ್ನುಳಿದ ಪ್ರಶ್ನೆಪತ್ರಿಕೆಗಳನ್ನ ಬೆರಳಚ್ಚಿಸುವ ಕಾರ್ಯ ಭರದಿಂದ ಸಾಗಿದೆ.. ಶೀಘ್ರದಲ್ಲೇ ಈ ತಾಣ ಸಮಗ್ರವಾಗಲಿದೆ. ನಿಮ್ಮ ಸಹಕಾರ, ಪ್ರೋತ್ಸಾಹಕ್ಕೆ ಪ್ರಶ್ನೋತ್ತರ ತಂಡ ಕೃತಜ್ಞತೆ ಸಲ್ಲಿಸುತ್ತದೆ.

ಆತ್ಮೀಯ ಸ್ಪರ್ಧಾರ್ಥಿಗಳೇ, ಎಲ್ಲ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತೆ ಮಾಹಿತಿ ನೀಡಲಾಗುತ್ತಿದೆ.https://t.me/kpsc2019 | General Knowledge in Kannada
https://www.highrevenuegate.com/dst1z9b3?key=96fa453e5c910a6715da3b114f6d9e35

RECENT POSTS

6

https://www.videosprofitnetwork.com/watch.xml?key=35286665df409d9f630563e3a619eb10

ಇತ್ತೀಚಿನ ಸುದ್ದಿ...Recent Notes

8

https://www.highrevenuegate.com/his7kbtc7?key=50a282e312a45be4aa549d301f853be2

Saturday, March 07, 2015

  Pundalik       Saturday, March 07, 2015

ವಿದ್ಯಾರ್ಥಿ-ಶಿಕ್ಷಕ ಸಂಬಂಧ ಪವಿತ್ರ, ಅಗಾಧ: ಶಕುಂತಲಾ ಶೆಟ್ಟಿ

ವಿದ್ಯಾರ್ಥಿ-ಶಿಕ್ಷಕ ಸಂಬಂಧ ಪವಿತ್ರ, ಅಗಾಧ: ಶಕುಂತಲಾ ಶೆಟ್ಟಿ
ಪುತ್ತೂರು: ವಿದ್ಯಾರ್ಥಿ ಮತ್ತು ಗುರುವಿನ ನಡುವಿನ ಸಂಬಂಧ ಪವಿತ್ರವಾದದು. ಜಗತ್ತಿನ ಯಾವುದೇ ಆಗು-ಹೋಗುಗಳನ್ನು ಅರಿಯದ ಮುಗ್ಧ ಮಗುವನ್ನು ತಂದೆ- ತಾಯಿ- ಗುರುವಿನ ಕೈಯಲ್ಲಿಟ್ಟು ತಮ್ಮ ಮಗುವಿಗೆ ಸಂಸ್ಕಾರ ಸಿಗಲಿ ಎಂದು ಆಶಿಸುತ್ತಾರೆ. ಯಾವ ಮಗುವೂ ತನ್ನ ಮೇಸ್ಟ್ರು ಹೇಳಿದ್ದನ್ನು ಮಾತ್ರ ನಂಬುತ್ತದೆ. ಏಕೆಂದರೆ ಆ ಮಟ್ಟಿನ ನಂಬುಗೆ ಮತ್ತು ವಿಶ್ವಾಸ ಆ ಮಗುವಿಗೆ ಇರುತ್ತದೆ. ಆದ್ದರಿಂದ ಶಿಕ್ಷಕ ತನ್ನ ವಿದ್ಯಾರ್ಥಿಯನ್ನು ಅಷ್ಟೇ ಪ್ರೀತಿ, ವಾತ್ಸಲ್ಯದಿಂದ ಸಲಹಬೇಕು ಎಂದು ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.

ದ.ಕ. ಜಿಪಂ ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ದಿನಾಚರಣಾ ಸಮಿತಿ ಹಾಗೂ ಶಿಕ್ಷಕರ ಕಲ್ಯಾಣನಿಧಿ ಮತ್ತು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆಶ್ರಯದಲ್ಲಿ ಗುರುಭವನದಲ್ಲಿ ಶುಕ್ರವಾರ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಗುರುವಿಗಿಂತ ದೊಡ್ಡವರು ಯಾರೂ ಇಲ್ಲ. ಗುರು-ಶಿಷ್ಯ ಸಂಬಂಧಕ್ಕಿಂತ ಮಿಗಿಲಾದುದು ಬೇರೆ ಇಲ್ಲ. ಆದರೆ ಇತ್ತೀಚೆಗೆ ಈ ಸಂಬಂಧವೂ ಹೇಯವಾಗುವಂಥ ಘಟನೆಗಳು ನಡೆಯುತ್ತಿವೆ ಎಂದು ವಿಷಾದಿಸಿದ ಅವರು, ಪ್ರಾಮಾಣಿಕ ಶಿಕ್ಷಕ ತನ್ನ ವಿದ್ಯಾರ್ಥಿಯ ಸಾಧನೆಯನ್ನು ಕಂಡು ಸಂಭ್ರಮಿಸುತ್ತಾನೆ. ಪ್ರಾಥಮಿಕ ಹಂತದಲ್ಲಿ ಮಕ್ಕಳು ಶಿಕ್ಷಕರನ್ನು ಅನುಸರಿಸುತ್ತಾರೆ. ಹಾಗಾಗಿ ವಿದ್ಯಾರ್ಥಿಗಳು ಉತ್ತಮ ಮೌಲ್ಯವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವಲ್ಲಿ ಶಿಕ್ಷಕರು ಕಾರಣಕರ್ತರಾಗಬೇಕು ಎಂದರು. 
logoblog

Thanks for reading

Previous
« Prev Post

No comments:

Post a Comment

Disclaimer

Disclaimer/ Notice: This all documents and PDF notes & Magazines (Only Education and Knowledge Propose) we are downloaded from the (whatsApp & Telegram Groups) internet. We are not responsible for any type of copyright issues. If we have any complaint regarding this content. We are trying to remove this content shorty. Contact: pyadavgk@gmail.com

Popular Posts

Followers

Contact Form

Name

Email *

Message *