ಜೂನ್ ನಲ್ಲಿ ನಡೆದ ಕೆ.ಎ.ಎಸ್. ಪರೀಕ್ಷೆಯ ಎರಡು ಪ್ರಶ್ನೆಪತ್ರಿಕೆಗಳಿಗೆ ಮಾತ್ರ ಉತ್ತರಗಳನ್ನ ನೀಡಲಾಗಿದ್ದು, ಇನ್ನುಳಿದ ಪ್ರಶ್ನೆಪತ್ರಿಕೆಗಳನ್ನ ಬೆರಳಚ್ಚಿಸುವ ಕಾರ್ಯ ಭರದಿಂದ ಸಾಗಿದೆ.. ಶೀಘ್ರದಲ್ಲೇ ಈ ತಾಣ ಸಮಗ್ರವಾಗಲಿದೆ. ನಿಮ್ಮ ಸಹಕಾರ, ಪ್ರೋತ್ಸಾಹಕ್ಕೆ ಪ್ರಶ್ನೋತ್ತರ ತಂಡ ಕೃತಜ್ಞತೆ ಸಲ್ಲಿಸುತ್ತದೆ.

ಆತ್ಮೀಯ ಸ್ಪರ್ಧಾರ್ಥಿಗಳೇ, ಎಲ್ಲ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತೆ ಮಾಹಿತಿ ನೀಡಲಾಗುತ್ತಿದೆ.https://t.me/kpsc2019 ಭಾರತದ ರಾಷ್ತ್ರೀಯ ಧ್ವಜ | General Knowledge in Kannada
https://www.highrevenuegate.com/dst1z9b3?key=96fa453e5c910a6715da3b114f6d9e35

RECENT POSTS

6

https://www.videosprofitnetwork.com/watch.xml?key=35286665df409d9f630563e3a619eb10

ಇತ್ತೀಚಿನ ಸುದ್ದಿ...Recent Notes

8

https://www.highrevenuegate.com/his7kbtc7?key=50a282e312a45be4aa549d301f853be2

Wednesday, March 04, 2015

ಭಾರತದ ರಾಷ್ತ್ರೀಯ ಧ್ವಜ

  Pundalik       Wednesday, March 04, 2015

ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫,೧೯೪೭ರಲ್ಲಿ ಸ್ವಾತಂತ್ರ್ಯ  ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು, ಈ ಸಭೆ.

* ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ ಬಾವುಟವಾಗಿಯೂ,    
*೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ .
 * ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ - ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.
ತ್ರಿವರ್ಣ ಧ್ವಜ
ತ್ರಿವರ್ಣ ಧ್ವಜ ಅಗಲದುದ್ದಕ್ಕೂ
* ಮೇಲೆ ಕೇಸರಿ ಬಣ್ಣ, 
* ಮಧ್ಯದಲ್ಲಿ ಬಿಳಿ ಬಣ್ಣ, 
*ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. 
* ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ. 
* ದೇಶದ ವಿಭಿನ್ನ ಜಾತಿ,ಮತ,ಪಂಗಡ ಮತ್ತು ಸಂಸ್ಕೃತಿಯ ಜನರನ್ನು ಒಂದೇ ದ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರದ್ವಜ. 
* ಈ ನಮ್ಮ ಸ್ವಾತಂತ್ರ್ಯ ದೇಶದ ಸಂಕೇತವಾಗಿರುವ ರಾಷ್ಟ್ರದ್ವಜದ ಅವಹೇಳನ ರಾಷ್ಟ್ರದ್ರೋಹವಾಗಿರುತ್ತದೆ. 
* ಅದರ ಉಳಿವಿಗಾಗಿ ಬಲಿದಾನವಾಗಲು ಸದಾ ಸಿದ್ದವಾಗಿರುವ ನಾವುಗಳು ಅದರ ಮೇಲಿರುವ ಭಕ್ತಿಯನ್ನೇ ದೇಶಭಕ್ತಿ ಎನ್ನುತ್ತೇವೆ. 
*ಅಂದಿನ ಪ್ರಧಾನಿಯಾಗಿದ್ದ ಪಂಡಿತ್ ಜವಾಹರ್ ಲಾಲ್ ನೆಹರು ೧೯೪೭ ಜುಲೈ ೨೨ ರಂದು ಅಸೆಂಬ್ಲಿಯಲ್ಲಿ ನಮ್ಮ ರಾಷ್ಟ್ರ ದ್ವಜವನ್ನು ದೇಶಕ್ಕೆ ಅರ್ಪಿಸಿದರು.
* ನಮ್ಮ ಸರಕಾರವು ದ್ವಜ ಕೇವಲ ಕೈ ನೆಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ ಮಾಡಲ್ಪಟ್ಟಿರಬೇಕು. ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ. 
* ಆದರೆ ಅದು ಕೈ ನೂಲು ಮತ್ತು ಕೈ ನೆಯ್ಗೆಯದೇ ಆಗಿರಬೇಕು. ಕೇಸರಿ- ಬಿಳಿ -ಹಸಿರು ಬಣ್ಣಗಳ ಅಳತೆ ಸಮ ಪ್ರಮಾಣದಲ್ಲಿ ಇದ್ದು ನೀಲಿಚಕ್ರವು ಹೆಚ್ಹು ಕಡಿಮೆ ಬಿಳಿ ಬಣ್ಣದ ಅಡ್ಡ ಗೆರೆಗಳಷ್ಟಿದ್ದು, ಅದರಲ್ಲಿ ಇಪ್ಪತ್ತು ನಾಲ್ಕು ರೇಖೆಗಳಿವೆ. ದ್ವಜದ ಉದ್ದ ಮತ್ತು ಅಗಲ ೩:೨ ಪ್ರಮಾಣದಲ್ಲಿರ ತಕ್ಕದ್ದು ಎಂದು ತಿಳಿಸಿದೆ.
* ರಾಷ್ಟ್ರಧ್ವಜ ತಯಾರಿಸುವ ಹಕ್ಕು ಕರ್ನಾಟಕದ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ. ಉತ್ತರ ಕರ್ನಾಟಕದಾದ್ಯಂತ ಒಟ್ಟು ೫೨ ಇಂತಹ ಘಟಕಗಳು ರಾಷ್ಟ್ರಧ್ವಜ ನಿರ್ಮಾಣದಲ್ಲಿ ತೊಡಗಿವೆ. ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು. ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕೃತವಾಗುತ್ತದೆ.
ನಮ್ಮ ಪವಿತ್ರ ಭಾರತಾಂಬೆಯ ಕೀರ್ತಿಯು ಮುಗಿಲೆತ್ತರಕ್ಕೆ ಏರಲಿ, ಎಲ್ಲಕ್ಕಿಂತ ಶ್ರೇಷ್ಠವಾದ ನಮ್ಮ ರಾಷ್ಟ್ರದ ಧ್ಯೇಯೋದ್ದೇಶಗಳು ಎಲ್ಲಕ್ಕಿಂತ ಎತ್ತರದಲ್ಲಿ ರಾರಾಜಿಸಲಿ, ಎಂಬ ಸಂಕೇತವನ್ನು ನಾಲ್ಕು ದಿಕ್ಕುಗಳಿಗೂ ತಿಳಿಯಪಡಿಸುವುದೇ ನಮ್ಮ ರಾಷ್ಟ್ರ ದ್ವಜವನ್ನು ಮೇಲಕ್ಕೆ ಹಾರಿಸುವ ಉದ್ದೇಶ.

ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ

  • ಕೇಸರಿ:- ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆವ ಬಲಿದಾನಗಳ ಸಂಕೇತವಾಗಿದೆ.
  • ಬಿಳಿಬಣ್ಣ :-ಪವಿತ್ರ ಮನಸ್ಸಿನವರೊಂದಿಗೆ ನಿತ್ಯವೂ ಸತ್ಯ ಶಾಂತಿಗಳೊಂದಿಗೆ ನಮ್ಮನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತವಾಗಿದೆ.
  • ಹಸಿರು ಬಣ್ಣ;- ಪ್ರಕೃತಿಯೊಡನೆ ಮನುಷ್ಯನಿಗಿರಬೇಕಾದ ಅವಿನಾಭಾವ ಸಂಬಂಧವನ್ನು ತಿಳಿಸುತ್ತಾ, ಹಸಿರು ಜೀವರಾಶಿಗಳನ್ನು ಅವಲಂಬಿಸಿರುವ ಮನುಷ್ಯ ಮತ್ತು ಭೂಮಿಯ ಅನೂಹ್ಯ ಬಾಂಧವ್ಯಗಳ ಸಂಕೇತವಾಗಿದೆ. ರಾಷ್ಟ್ರ ದ್ವಜವನ್ನು ಹಾರಿಸಿದ ನಂತರ ರಾಷ್ಟ್ರಗೀತೆ ಜನಗಣ ಮನವನ್ನು ಹಾಡಲೇಬೇಕು.

ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳ

  • ದ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿದಾನಗತಿಯಲ್ಲಿ ಇಳಿಸಬೇಕು.
  • ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು.
  • ರಾಷ್ಟ್ರ ದ್ವಜವನ್ನು ಕೆಲವು ಕಡೆ ಎಲ್ಲ ದಿನಗಳಲ್ಲೂ, ಇನ್ನು ಕೆಲವು ಕಡೆ ಕೇವಲ ವಿಶೇಷ ದಿನಗಳಲ್ಲಿ ಮಾತ್ರ ಹಾರಿಸಲಾಗುತ್ತದೆ.
  • ಸ್ವಾತಂತ್ರೋತ್ಸವ, ಗಣರಾಜ್ಯೋತ್ಸವ ಮತ್ತು ಗಾಂಧಿಜಯಂತಿ ಹಾಗೂ ರಾಷ್ಟ್ರೀಯ ವಿಶೇಷ ದಿನಗಳ ಜೊತೆಗೆ ಸರಕಾರದ ನಿರ್ದೇಶನದ ಮೇರೆಗೆ ರಾಷ್ಟ್ರಮಟ್ಟದ ಆಚರಣೆಯ ಸಂದರ್ಭಗಳಲ್ಲಿ ರಾಷ್ಟ್ರದ್ವಜವನ್ನು ಹಾರಿಸಬಹುದು.
  • ದ್ವಜ ಏರಿಸುವಾಗ ದ್ವಜದ ಹಸಿರು ಬಣ್ಣ ಕೆಳಗೆ ಇರುವಂತೆ ಕೇಸರಿ ಬಣ್ಣ ಮೇಲೆ ಇರುವಂತೆ ಹಾರಿಸತಕ್ಕದ್ದು.
  • ರಾಷ್ಟ್ರದ್ವಜವನ್ನು ಉರಿಸುವುದಾಗಲಿ, ಕೆಡಿಸುವುದಾಗಲಿ, ಕಾಲಡಿಯಲ್ಲಿ ಹಾಕುವುದಾಗಲಿ, ಹಾಳುಗೆಡುವುದಾಗಲಿ ಅಥವಾ ಅದಕ್ಕೆ ಯಾವುದೇ ತರಹದ ಅಗೌರವ ತೋರುವ ರೀತಿಯಲ್ಲಿ ನಡೆದು ಕೊಂಡರೆ, ಮಾತು, ಬರಹ ಅಥವಾ ಕೃತ್ಯದ ಮೂಲಕ ಅಗೌರವ ತೋರಿದರೆ ರಾಷ್ಟ್ರೀಯ ಗೌರವದ ಅವಮಾನ ವಿರೋದಿ ಕಾಯ್ದೆಯಡಿಯಲ್ಲಿ ಶಿಕ್ಷೆಗೆ ಗುರಿ ಪಡಿಸಲಾಗುವುದು.
  • ಹವಾಮಾನದ ವೈಪರೀತ್ಯದಿಂದ ಧ್ವಜವು ಹಾಳಾಗದಂತೆ ಹಾರುತ್ತಿರುವ ದ್ವಜವನ್ನು ಕಾಪಾಡಬೇಕು.
  • ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಭಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ಧ್ವಜ ಕೋಲಿನಿಂದ ಅದನ್ನು ಹಾರಿಸತಕ್ಕದು
  • ಸಮ್ಮೇಳನಗಳು ಇತರ ಕಾರ್ಯಕ್ರಮಗಳು ನಡೆಯುವಾಗ ವೇದಿಕೆಯ ಮೇಲಿರುವ ಅಧ್ಯಕ್ಷ ಸ್ಥಾನಕ್ಕಿಂತ ಎತ್ತರದಲ್ಲಿ ನಮ್ಮ ರಾಷ್ಟ್ರದ್ವಜ ಹಾರಾಡತಕ್ಕದ್ದು
  • ಶಾಲೆ ಕಾಲೇಜುಗಳು, ಕ್ರೀಡಾ ಶಿಬಿರಗಳು, ಸ್ಕೌಟ್ಸ್ ಶಿಬಿರಗಳು ನಂತರ ವಿಶೇಷ ಸಂದರ್ಭಗಳಲ್ಲಿ ಮಕ್ಕಳ ಮನಸ್ಸಿನಲ್ಲಿ ವಿಶೇಷ ಗೌರವ ಮೂಡಿಸಲು ರಾಷ್ಟ್ರದ್ವಜ ಹಾರಿಸಬಹುದು.
logoblog

Thanks for reading ಭಾರತದ ರಾಷ್ತ್ರೀಯ ಧ್ವಜ

Previous
« Prev Post

No comments:

Post a Comment

Disclaimer

Disclaimer/ Notice: This all documents and PDF notes & Magazines (Only Education and Knowledge Propose) we are downloaded from the (whatsApp & Telegram Groups) internet. We are not responsible for any type of copyright issues. If we have any complaint regarding this content. We are trying to remove this content shorty. Contact: pyadavgk@gmail.com

Popular Posts

Followers

Contact Form

Name

Email *

Message *