ಅಯೋಧ್ಯೆ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ಗುರುವಾರ ಮಧ್ಯಾಹ್ನ ಮಹತ್ವದ ತೀರ್ಪು ನೀಡಲಿದೆ.
ಮಸೀದಿಯು ಇಸ್ಲಾಂನ ಅವಿಭಾಜ್ಯ ಅಂಗವಲ್ಲವೆಂದು 1994ರಲ್ಲಿ ನೀಡಿದ್ದ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಲು ಸಂವಿಧಾನ ಪೀಠಕ್ಕೆ ವರ್ಗಾಯಿಸಬೇಕೆ ಅಥವಾ ಬೇಡವೆ ಎಂಬುದನ್ನು ಸುಪ್ರೀಂ ಕೋರ್ಟ್ ಗುರುವಾರ ನಿರ್ಧರಿಸಲಿದೆ. 1994 ರಲ್ಲಿ ಪ್ರಾರ್ಥನೆ ಸಲ್ಲಿಸಲು ಮಸೀದಿ ಮುಖ್ಯವಲ್ಲ, ಎಲ್ಲಿ ಬೇಕಾದರೂ ಪ್ರಾಥನೆ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಅಲ್ಲದೇ ಸರ್ಕಾರ ಅವಶ್ಯಕತೆ ಇದ್ದಲ್ಲಿ ಮಸೀದಿಯನ್ನು ನಿರ್ಮಾಣ ಮಾಡಿದ್ದ ಜಾಗವನ್ನು ಒತ್ತುವರಿ ಮಾಡಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟಿತ್ತು. ಈ ತೀರ್ಪು ವಿರೋಧಿಸಿರುವ ಮುಸ್ಲಿಂ ಸಮುದಾಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದವು. ಪ್ರಕರಣ ವಿಚಾರಣೆ ನಡೆಸಿರುವ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಲಿದೆ.
2010ರಲ್ಲಿ ಅಯೋಧ್ಯೆಯ ವಿವಾದಿತ ಪ್ರದೇಶವನ್ನು ಮೂರು ಭಾಗವಾಗಿ ವಿಂಗಡಿಸಿ ಅಲಹಬಾದ್ ಹೈಕೋರ್ಟ್ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಇಂದಿನ ತೀರ್ಪು ಇದರ ಭಾಗವಾಗಿ ಹೊರಬರಲಿದೆ.
Telegram Link https://t.me/joinchat/AAAAAE9lq2X6z4BbgUUCnw Friends, If you like this post,kindly comment below the post and do share your Response, (Thanks for Reading....)
No comments:
Post a Comment