
ದೆಹಲಿ: ಆಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಬ್ರಿಟನ್‍ನ ಮಧ್ಯವರ್ತಿ ಕ್ರಿಸ್ಟಿಯನ್ ಮೈಕೆಲ್ ಗಡಿಪಾರಿಗೆ ದುಬೈ ಕೋರ್ಟ್ ಆದೇಶಿಸಿದೆ.
ವಿವಿಐಪಿ ಹೆಲಿಕಾಪ್ಟರ್ ಗಳ ಒಪ್ಪಂದಕ್ಕೆ ಬದಲಾಗಿ ಈತ ಲಂಚ ಪಡೆದಿದ್ದ ಎನ್ನಲಾಗಿದ್ದು, ಭಾರತಕ್ಕೆ ಬೇಕಾಗಿದ್ದ ಮೈಕೆಲ್ ನನ್ನು ಕಳೆದ ವರ್ಷ ದುಬೈನಲ್ಲಿ ಬಂಧಿಸಲಾಗಿತ್ತು. ಅಲ್ಲದೆ ಗಡಿಪಾರಿನ ಬಗ್ಗೆ ವಿಚಾರಣೆಯನ್ನೂ ನಡೆಸಲಾಗಿತ್ತು. ಆಗಸ್ಟಾ ವೆಸ್ಟ್ ಲ್ಯಾಂಡ್‍ನಿಂದ ವಿವಿಐಪಿಗಳ ಸಂಚಾರಕ್ಕೆಂದು 12 ಐಷಾರಾಮಿ ಹೆಲಿಕಾಪ್ಟರ್ ಗಳ ಖರೀದಿಸುವ ಒಪ್ಪಂದಕ್ಕೆ 2007ರಲ್ಲಿ ಭಾರತ ಸಹಿ ಹಾಕಿತ್ತು. ಆದರೆ ಬಳಿಕ ಈ ಒಪ್ಪಂದದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದೆ ಅನ್ನೋ ಆರೋಪ ಕೇಳಿ ಬಂತು. ಅಧಿಕಾರಿಗಳಿಗೆ ಕೋಟ್ಯಾಂತರ ರೂ. ಲಂಚ ಪಾವತಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದರಿಂದ 2014ರಲ್ಲಿ ಕೇಂದ್ರ ಸರಕಾರ ಈ ಒಪ್ಪಂದವನ್ನು ರದ್ದುಗೊಳಿಸಿತ್ತು.
ಇನ್ನು ಈ ಹಗರಣಕ್ಕೆ ಸಂಬಂಧಿಸಿದಂತೆ 2016ರಲ್ಲಿ ಭಾರತೀಯ ವಾಯಪಡೆಯ ಮಾಜಿ ಮುಖ್ಯಸ್ಥ ಎಸ್.ಪಿ.ತ್ಯಾಗಿ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು.
Friends, If you like this post,kindly comment below the post and do share your Response, (Thanks for Reading....)
No comments:
Post a Comment