ಕಾರವಾರ: ಉಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಗೋಕರ್ಣ ಶ್ರೀ ಮಹಾಬಲೇಶ್ವರ ದೇವಸ್ಥಾನದ ಆಡಳಿತವನ್ನು ಬುಧವಾರ ಸರಕಾರದ ವಶಕ್ಕೆ ಪಡೆಯಲಾಯಿತು.
ದೇವಸ್ಥಾನದ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರೂ ಅಗಿರುವ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಆಡಳಿತವನ್ನು ವಹಿಸಿಕೊಂಡರು. ದೇವಸ್ಥಾನದ ಸಾಮಗ್ರಿ, ಬೆಲೆಬಾಳುವ ವಸ್ತುಗಳ ಪಟ್ಟಿಯನ್ನು ಇಂದು ಪುನಃ ಪರಿಶೀಲನೆ ನಡೆಸಿ ಉಸ್ತುವಾರಿ ಸಮಿತಿ ವಶಕ್ಕೆ ಪಡೆಯಲಾಯಿತು. 2008ರಲ್ಲಿ ಸರ್ಕಾರ ಹೊಸನಗರದ ಶ್ರೀರಾಮಚಂದ್ರಾಪುರ ಮಠಕ್ಕೆ ಗೋಕರ್ಣ ಮಹಬಲೇಶ್ವರ ದೇವಸ್ಥಾನದ ಆಡಳಿತವನ್ನು ವಹಿಸಿತ್ತು. ಇದನ್ನು ವಿರೋಧಿಸಿ ಕೆಲವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು.
ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಆಡಳಿತವನ್ನು ರಾಮಚಂದ್ರಾಪುರ ಮಠದ ಆಡಳಿತ ಮಂಡಳಿಯಿಂದ ತಮ್ಮ ವಶಕ್ಕೆ ಪಡೆದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್, ಹೈಕೋರ್ಟ್ ಆದೇಶದಂತೆ ದೇವಾಲಯದ ಆಡಳಿತವನ್ನು ತಮ್ಮ ನೇತೃತ್ವದ ಉಸ್ತುವಾರಿ ಸಮಿತಿ ವಹಿಸಿಕೊಂಡಿದೆ ಎಂದು ತಿಳಿಸಿದರು.
Friends, If you like this post,kindly comment below the post and do share your Response, (Thanks for Reading....)
No comments:
Post a Comment