ಇನ್ನು ಮುಂದೆ ವನ್ಯಜೀವಿಗಳಿಂದ ಮೃತರಾದ ಕುಟುಂಬದವರಿಗೆ ಪ್ರತಿ ತಿಂಗಳು ರೂ. 2000 ಮಾಸಾಶನವನ್ನು ನೀಡಲು ಇಂದಿನ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಶ್ರೀ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಅವರು ಇಂದು ನಡೆದ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಈ ವಿಚಾರವನ್ನು ತಿಳಿಸಿದ್ದಾರೆ. ಇದುವರೆಗೂ ವನ್ಯಜೀವಿಗಳಿಂದ ಮೃತರಾದ ಕುಟುಂಬಕ್ಕೆ ರೂ. 5 ಲಕ್ಷ ಪರಿಹಾರ ಧನ ನೀಡಲಾಗುತ್ತಿತ್ತು. ಅದರ ಜೊತೆಗೆ ಈಗ 5 ವರ್ಷದ ವರೆಗೆ ಮಾಸಾಶನವನ್ನು ಸಹ ನೀಡಲಾಗುವುದು ಎಂದರು.
ತೋಟಗಾರಿಕೆ ಬೆಳೆಗಳಲ್ಲಿ ಒಂದಾದ ತೆಂಗು ಬೆಳೆಗಾರರು ಹಾನಿಗಿಡಾಗಿ ನಷ್ಟ ಅನುಭವಿಸಿರುವ ಹಿನ್ನೆಲೆಯಲ್ಲಿ 44,547 ಹೆಕ್ಟರ್ ತೆಂಗು ಬೆಳೆಗಾರರಿಗೆ 178 ಕೋಟಿ ರೂಪಾಯಿಗಳನ್ನು ಬೆಳೆ ಪರಿಹಾರ ರೂಪದಲ್ಲಿ ನೀಡಲು ಇಂದಿನ ಒಪ್ಪಿಗೆ ನೀಡಲಾಗಿದೆ ಎಂದು ಅವರು ಹೇಳಿದರು.
# ಸಚಿವ ಸಂಪುಟ ಸಭೆಯ ಇತರ ನಿರ್ಣಯಗಳು :
> ಹಾಸನದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಾಸ್ಟೆಲ್, ಗ್ರಂಥಾಲಯ ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು 50 ಕೋಟಿ ರೂ.ಗಳ ಕಾಮಗಾರಿಗಳನ್ನು ಕೈಗೊಳ್ಳಲು ಒಪ್ಪಿಗೆ ನೀಡಲಾಗಿದೆ.
> ಹಾಸನದ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮೊದಲ ಹಂತವಾಗಿ ರೂ. 50 ಕೋಟಿ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಬೀದರ್ ಮತ್ತು ಶಿವಮೊಗ್ಗಗಳ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹೃದ್ರೋಗ ಚಿಕಿತ್ಸಾ ಘಟಕ ಸ್ಥಾಪನೆ ಮಾಡಲು ಬೀದರ್‍ಗೆ 7.25 ಕೋಟಿ ರೂ. ಹಾಗೂ ಶಿವಮೊಗ್ಗಕ್ಕೆ 7.81 ಕೋಟಿ ರೂ.ಗಳನ್ನು ಒದಗಿಸಲು ಅನುಮೋದನೆ ನೀಡಲಾಗಿದೆ.
> ತೋಟಗಾರಿಕೆ ಉತ್ಕøಷ್ಟ ಕೇಂದ್ರಗಳನ್ನು ರಾಜ್ಯದ 6 ಕಡೆಗಳಲ್ಲಿ ಸ್ಥಾಪಿಸಲಾಗಿದೆ. (ಬಾಗಲಕೋಟೆ, ಧಾರವಾಡ, ಕೋಲಾರ, ಮಂಡ್ಯ, ಹಾಸನ ಮತ್ತು ಶಿವಮೊಗ್ಗ). ಇವುಗಳ ನಿರ್ವಹಣೆಗೆ ಕರ್ನಾಟಕ ರಾಜ್ಯ ತೋಟಗಾರಿಕೆ ಉತ್ಕøಷ್ಟ ಕೇಂದ್ರ ಏಜೆನ್ಸಿಗಳನ್ನು ಸ್ಥಾಪನೆ ಮಾಡಲು 60 ಕೋಟಿ ರೂ. ಗಳನ್ನು ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
> ರಕ್ಷಣಾ ಇಲಾಖೆಯೊಂದಿಗೆ ರಾಜ್ಯ ಸರ್ಕಾರ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ 45,165 ಚದರ ಮೀಟರ್ ಭೂಮಿಯನ್ನು ವಿನಿಮಯ ಮಾಡಿಕೊಳ್ಳಲು ಇಂದಿನ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ರಕ್ಷಣಾ ಇಲಾಖೆ 45,165, ಚದರ ಮೀಟರ್ ಭೂಮಿ ನೀಡಲು ಒಪ್ಪಿದೆ. ಅದಕ್ಕೆ ಬದಲಾಗಿ ರಾಜ್ಯ ಸರ್ಕಾರ ಅಷ್ಟೇ ಪ್ರಮಾಣದ ಬದಲಿ ಭೂಮಿಯನ್ನು ನೀಡುತ್ತದೆ.
> 108 ಆಂಬ್ಯುಲೆನ್ಸ್ ಸೇವೆಗೆ 2009ರಲ್ಲಿ ಮಾಡಿಕೊಳ್ಳಲಾಗಿದ್ದ ಕರಾರು ಮುಗಿದ್ದಿದ್ದು, ಮುಂದಿನ ಒಂದು ವರ್ಷದ ಅವಧಿಯೊಳಗೆ ಹೊಸ ಟೆಂಡರ್ ಪ್ರಕ್ರಿಯೆ ಮುಗಿಸಲು ಹಾಗೂ ಅದುವರೆಗೂ ಈಗಿರುವ ಕರಾರನ್ನು ಮುಂದು ವರೆಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
> ವಿವಿಧ ಪೋಲೀಸ್ ಠಾಣೆಗಳಲ್ಲಿ ವಿವಿಧ ಸಂಘ ಸಂಸ್ಥೆಗಳ ಮೇಲೆ ಸಾರ್ವಜನಿಕ ಪ್ರತಿಭಟನೆ ವೇಳೆ ದಾಖಲಾಗಿದ್ದ 14 ಪ್ರಕರಣಗಳ ಕೇಸ್‍ಗಳನ್ನು ಕೈಬಿಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
> ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಯಾದಗಿರಿ, ಹುಮುನಾಬಾದ್, ಹೊಸಪೇಟೆ ಹಾಗೂ ಲಿಂಗಸುಗುರುಗಳಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಡೆಸ್ಸಾಲ್ಟ್ ಸಿಸ್ಟಂ ಸಹಯೋಗದೊಂದಿಗೆ ಸ್ಥಾಪನೆ ಮಾಡಲು 224 ಕೋಟಿ ರೂಪಾಯಿಗಳ ಯೋಜನೆಗೆ ಒಪ್ಪಿಗೆ ನೀಡಿದೆ. ಇದರಲ್ಲಿ ಡೆಸ್ಸಾಲ್ಟ್ ಸಿಸ್ಟಂ ಅವರ ಕೊಡುಗೆ 203.33 ಕೋಟಿ ರೂಪಾಯಿ ಆಗಿದೆ.
Source : ಈ ಸಂಜೆ’
Source : ಈ ಸಂಜೆ’
No comments:
Post a Comment