ಅಂತರರಾಷ್ಟ್ರೀಯ ಅಥ್ಲೀಟ್ ಎಂ.ಆರ್.ಪೂವಮ್ಮ ಅವರಿಗೆ ಈ ಬಾರಿಯ ದಸರಾ ಸಿ.ಎಂ ಕಪ್ ಕ್ರೀಡಾಕೂಟ ಉದ್ಘಾಟಿಸುವ ಭಾಗ್ಯ ಲಭಿಸಿದೆ.
ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಅಕ್ಟೋಬರ್ 10 ರ ಬುಧವಾರ ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಮಂಗಳೂರಿನಲ್ಲಿ ನೆಲೆಸಿರುವ ಕೊಡಗು ಜಿಲ್ಲೆಯ ಪೂವಮ್ಮ, ಇಂಡೊನೇಷ್ಯಾದ ಜಕಾರ್ತದಲ್ಲಿ ಈಚೆಗೆ ನಡೆದ ಏಷ್ಯನ್ ಕ್ರೀಡಾಕೂಟದ 4x400 ಮೀಟರ್ಸ್ ರಿಲೇನಲ್ಲಿ ಚಿನ್ನ ಹಾಗೂ ಮಿಶ್ರ ರಿಲೇನಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ.
‘ಹಲವಾರು ಪ್ರತಿಭಾವಂತ ಅಥ್ಲೀಟ್‌ಗಳನ್ನು ಬೆಳಕಿಗೆ ತಂದಿರುವ ಕ್ರೀಡಾಕೂಟ ಉದ್ಘಾಟಿಸಲು ಸಹಜವಾಗಿಯೇ ಖುಷಿ ಆಗುತ್ತಿದೆ. ಈ ಕ್ರೀಡಾಕೂಟದಲ್ಲಿ ನಾನೆಂದೂ ಭಾಗವಹಿಸಿಲ್ಲ. ಆದರೆ, ಈಗ ಉದ್ಘಾಟನೆಗೆ ಅವಕಾಶ ಸಿಕ್ಕಿದೆ’ ಎಂದು ಪೂವಮ್ಮ ‘ಪ್ರಜಾವಾಣಿ’ಗೆ ಪ‍್ರತಿಕ್ರಿಯಿಸಿದರು.
No comments:
Post a Comment